ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ !

Kannada News

22-09-2017

ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕುಸುಗಲ್ ರಸ್ತೆಯ, ಸುಂದರಪುರಮ್ ಲೇಔಟ್ ನ ಮನೆ, ಮತ್ತು ಸುಂದರ್ ರೆಸಿಡಿನ್ಸಿ ಮೇಲೆ ದಾಳಿ ನಡೆಸಿದ್ದಾರೆ. ನಿನ್ನೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಇನ್ಸ್ ಪೆಕ್ಟರ್ ಎಸ್.ಎಸ್. ಹಿರೇಮಠ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ರಾಕೇಶ್ ಕಠಾರೆ ಮತ್ತು ಮಂಜುನಾಥ ಕಠಾರೆ ಎಂಬಿಬ್ಬರನ್ನು ಬಂಧಿಸಿದ್ದಾರೆ. ಬುಕ್ಕಿಗಳಿಂದ 6 ಮೊಬೈಲ್ ಒಂದು ಲೈನ್ ಮಶೀನ್, ಟಿವಿ ಹಾಗೂ 6010 ರೂ. ನಗದು ವಶಪಡಿಸಿಕೊಂಡಿದ್ದಾರೆ. ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ