ನಾಳೆ ದಾಖಲೆ ಬಿಡುಗಡೆಯಿಲ್ಲ...

Kannada News

22-09-2017

ಬೆಳಗಾವಿ: ಸಿಎಂ ಮತ್ತು ಸಚಿವರ, ಶಾಸಕರ ಭ್ರಷ್ಟಾಚಾರಗಳನ್ನು ಬಯಲಿಗೆಳೆದು, ಪ್ರಮುಖ ದಾಲಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ನಾಳೆ ದಾಖಲೆ ಬಿಡುಗಡೆಯಿಲ್ಲ, ಇನ್ನೂ ಮೂರು ದಿನಗಳ ನಂತರ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿಎಂ ವಿರುದ್ಧ ದಾಖಲೆಗಳನ್ನು ನಾಳೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು, ಆದರೆ ಇದೀಗ ಮತ್ತೆ ಮೂರು ದಿನಗಳ ಕಾಲಾವಕಾಶ ಕೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಈ ಕುರಿತು ಮಹತ್ವದ ದಾಖಲೆಗಳ ಪ್ರತಿಯನ್ನು ಅಧಿಕಾರಿಗಳು ನೀಡುತ್ತಿಲ್ಲ, ಅಧಿಕಾರಿಗಳನ್ನು ಮುಚ್ಚಿಟ್ಟು ದಾಖಲೆಗಳೇ ಇಲ್ಲ ಅಂತಾ ಹೇಳುತ್ತಿದ್ದಾರೆ. ಆದರೂ ಕೆಲವು ದಾಖಲೆಗಳನ್ನು ನಾವು ಸಂಗ್ರಹಿಸಿದ್ದೇವೆ ಎಂದರು. ಅಲ್ಲದೇ ನಾಳೆ ಶಿಕಾರಿಪುರಕ್ಕೆ ಹೋಗಿ ಅಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ಅವುಗಳನ್ನು ಅನುವಾದ ಮಾಡಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು. ಮೊದಲು ಎಲ್ಲ ದಾಖಲೆಗಳು ನಮ್ಮ ಬಳಿ ಇವೆ ಅಂತಾ ಹೇಳಿದ್ದ ಬಿ.ಎಸ್.ವೈ ಈಗ, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ನೀಡುತ್ತಿಲ್ಲ ಎನ್ನುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ