ತೀರ್ಪು ಸಿಎಂಗೆ ಎಚ್ಚರಿಕೆಯ ಗಂಟೆ..

Kannada News

22-09-2017 245

ಹುಬ್ಬಳ್ಳಿ: ಯಡಿಯೂರಪ್ಪ ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿತ್ತು, ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು, ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ. ಡಾ.ಶಿವರಾಮ್ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ, ಸುಳ್ಳು ಕೇಸ್ ದಾಖಲಿಸಿ ಯಡಿಯೂರಪ್ಪನವರನ್ನು ಜೈಲಿಗೆ ಕಳಿಸುವ ಪ್ರಯತ್ನ ನಡೆದಿತ್ತು, ಎಂದು ಕಾಂಗ್ರೆಸ್ ವಿರುದ್ಧ ಆರೋಪಿಸಿದರು. ನ್ಯಾಯಾಲಯದ ತೀರ್ಪು ಸಿದ್ದರಾಮಯ್ಯನವರಿಗೆ ಎಚ್ಚರಿಕೆಯ ಗಂಟೆ, ಸಿಎಂ ಸೇಡಿನ ಮನೋಭಾವನೆ ನಿಲ್ಲಿಸಬೇಕು ಎಂದರು.

ಇನ್ನು ತೆರಿಗೆ ವಂಚನೆ ಮಾಡಲು ಕಂಪನಿಗಳನ್ನು ಹುಟ್ಟುಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ನಮ್ಮ ಕುಟುಂಬದವರ ಹೆಸರು ಬಂದಿದ್ದು, ಸ್ಪಷ್ಟೀಕರಣ ಕೊಡಿಸುತ್ತೇನೆ, ಕಂಪನಿ ರೆಜಿಸ್ಟ್ರೇಷನ್ ಮಾಡಲಾಗಿತ್ತು, ಆದರೆ ಹಣದ ವಹಿವಾಟು ನಡೆದಿರಲಿಲ್ಲ.  ಈ ಕುರಿತು ಎಲ್ಲ ದಾಖಲೆಗಳಿವೆ, ಈ ವಿಷಯದಲ್ಲಿ ರಾಜಕೀಯವಾಗಿ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿದರು.

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ