ಯಡಿಯೂರಪ್ಪ ಸಿಎಂ ಆಗೋದು ಖಚಿತ..?

Kannada News

22-09-2017

ಹುಬ್ಬಳ್ಳಿ: ಡಾ.ಶಿವರಾಮ್ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಸಂಸದ ಪ್ರಲ್ಹಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರ ಯಡಿಯೂರಪ್ಪನವರ ವಿರುದ್ಧ ಸುಳ್ಳು ಕೇಸ್ ದಾಖಲಿಸಿತ್ತು, ಕೆಲವರನ್ನು ದುರ್ಬಳಕೆ ಮಾಡಿಕೊಂಡು ಅನಗತ್ಯ ಕೇಸ್ ದಾಖಲಿಸಿತ್ತು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಐಟಿ ರೇಡ್ ನಡೆಯುತ್ತಿರುವುದಕ್ಕೆ ಸೇಡಿಗಾಗಿ ಕೇಸ್ ದಾಖಲಿಸಲಾಗಿತ್ತು. ಪ್ರಕರಣಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಆದೇಶ ಸ್ವಾಗತಾರ್ಹ ಎಂದರು.

ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆ, ಯಡಿಯೂರಪ್ಪ ನವರು ಮುಂದಿನ ಮುಖ್ಯ ಮಂತ್ರಿಯಾಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ