ಅನ್ನ ಭಾಗ್ಯ: ಮೋದಿ ಸರ್ಕಾರ ಪಾಲು ಹೆಚ್ಚು..?

Kannada News

23-09-2017

ಬಳ್ಳಾರಿ: ನಮ್ಮ ಪಕ್ಷ ಒಡೆದು 3 ಹೋಳಾಗಿತ್ತು. ಈಗ ಎಲ್ಲಾ ಒಂದಾಗಿದೆ, ಎಂದು ಬಳ್ಳಾರಿಯಲ್ಲಿ, ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಅಲ್ಲದೇ ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕರು ಗುತ್ತಿಗೆಯ ಕೆಲಸ ಮಾಡುತ್ತಿದ್ದಾರೆ, ಜನರತ್ತ ಬರುವುದನ್ನು ಮರೆತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಬಿಜೆಪಿಯ ಕಾರ್ಯಕ್ರಮದ ನಕಲು ಮಾಡುತ್ತಿದೆ. ಮೋದಿ ದೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸನ್ಯಾಸಿ ಅಂಥೆ ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಸಿದ್ದರಾಮಯ್ಯ ಹಿಂದುಳಿದ ಜನರ ಬಗ್ಗೆ ಮಾತನಾಡುವ ಅವರು, ಹಿಂದುಳಿದ ವರ್ಗಗಳ ಬಗ್ಗೆ ಕೆಲಸ ಮಾಡುತ್ತಿಲ್ಲ,  ಸಿದ್ದರಾಮಯ್ಯ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಕಾಂಗ್ರೆಸ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿ ಒಂದು ಮಾಡುವ ಕೆಲಸ ಮಾಡುತ್ತಿದೆ ಎಂದರು. ಅನ್ನ ಭಾಗ್ಯ ಯೋಜನೆಯಲ್ಲಿ ಮೋದಿ ಸರ್ಕಾರದ ಪಾಲು ಹೆಚ್ಚಿದೆ. ಹೀಗಾಗಿ ಅನ್ನಭಾಗ್ಯ ಮೋದಿದು, ಮೋದಿ ಬಡವರ ಪಾಲಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ