ಎಚ್.ಡಿ.ಕೆ ಗೆ ಯಶಸ್ವಿ ಹೃದಯ ಚಿಕಿತ್ಸೆ !

Kannada News

23-09-2017

ಕೊಪ್ಪಳ: ಮಾಜಿ ಸಿ.ಎಂ ಹಾಗೂ ಜೆಡಿಎಸ್.ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರ ಚಿಕಿತ್ಸೆಯಶಸ್ವಿಯಾಗಿದೆ. ಇನ್ನು ಬೇಗ ಗುಣಮುಖರಾಗುವಂತೆ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೊಪ್ಪಳದ ಗವಿಮಠ ಹಾಗೂ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಿದ್ದಾಪುರದಲ್ಲಿ ವೆಂಕಟೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಬಹುಬೇಗ ಎಚ್.ಡಿ.ಕೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಅಲ್ಲದೇ ಜಿಲ್ಲೆಯಾಧ್ಯಂತ ವಿವಿಧ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

ಇನ್ನು ಮಂಡ್ಯದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ದೇವರ ಮೊರೆ ಹೋಗಿದ್ದು, ಆದಷ್ಟು ಬೇಗ ಗುಣಮುಖರಾಗುವಂತೆ ಮೃತ್ಯುಂಜಯ ಹೋಮ, ವಿಶೇಷ ಪೂಜೆ ನೆರವೇರಿಸಿದ್ದಾರೆ. ಮಂಡ್ಯ ನಗರದ ವಿದ್ಯಾ ಗಣಪತಿ ದೇವಾಲಯದಲ್ಲಿ ಪೂಜೆ, ಹೋಮ ಸಲ್ಲಿಸಿದ್ದಾರೆ.

ಹಾಸನದಲ್ಲಿಯೂ, ಹೆಚ್.ಡಿ. ಕುಮಾರಸ್ವಾಮಿ ಇಂದು ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಹಿನ್ನೆಲೆ. ದೇವರ ಮೊರೆ ಹೋದ ಜೆಡಿಎಸ್ ಮುಖಂಡರು. ಹಾಸನದಲ್ಲಿ ನಿರುಬಾಗಿಳು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜೆಡಿಎಸ್ ಶಾಸಕ ಹೆಚ್.ಎಸ್.ಪ್ರಕಾಶ್ ನೇತೃತ್ವದಲ್ಲಿ, ನೂರಾರು ಕಾರ್ಯಕರ್ತರು, ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಅಲ್ಲದೇ ಮೈಸೂರಿನಲ್ಲಿಯೂ, ಜೆಡಿಎಸ್ ನಗರಾಧ್ಯಕ್ಷ ಕೆ.ಹರೀಶ್ ಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೋಟೆ ಆಂಜನೇಯ ಸ್ವಾಮಿ ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು, ಮತ್ತು ಕುಮಾರಸ್ವಾಮಿ ಶೀಘ್ರ ಗುಣಮುಖರಾಗಿ ಬರುವಂತೆ ಅಶೋಕ ರಸ್ತೆ ಹಜ್ರತ್ ಸೈಯದ ಸೈಯದಾನಿ ಮಸೀದಿ ಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬೆಳಗಾವಿ ನಗರದ ಗಣೇಶ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗುವಂತೆ, ಬೆಳಗಾವಿ ಜಿಲ್ಲಾ ಜೆಡಿಎಸ್ ಯುವ ಘಟಕ ಮತ್ತು ಮಹಿಳಾ ಘಟಕದ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಬೆಂಗಳೂರು ಗ್ರಾಮಾಂತರ ದೇವಹಳ್ಳಿಯಲ್ಲೂ, ಹೆಚ್ಡಿಕೆ ಶೀಘ್ರ ಗುಣಮುಖರಾಗಲೆಂದು, ಪ್ರಸಿದ್ಧ ಮಧುರೆ ಶ್ರೀ ಶನಿಮಹಾತ್ಮಸ್ವಾಮಿ ಶನಿಮಹಾತ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ