ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು !

Kannada News

25-09-2017

ಮೈಸೂರು: ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆಯು, ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ಕೆ.ಆರ್ ನಗರದ, ಕನಕನಗರದಲ್ಲಿ ಘಟನೆ ಸಂಭವಿಸಿದೆ. ಯೋಗೇಶ್ (40) ಮೃತ ದುರ್ದೈವಿ. ಪೈಪ್ ಲೈನ್ ಕಾಮಗಾರಿ ಕೆಲಸ ಮಾಡುತ್ತಿದ್ದ ವೇಳೆ ಅವಘಢ ಸಂಭವಿಸಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು, ಕೆ.ಆರ್.ನಗರ ತಾಲ್ಲೂಕಿನ ಮಧುವನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.  ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ