ಭಾರೀ ವಾಹನಗಳಿಗೆ ನಿರ್ಬಂಧ !

25-09-2017 282
ಮಂಡ್ಯ: ದಸರಾ ಮಹೋತ್ಸವ ಹಿನ್ನೆಲೆ, ಲಾರಿ ಮತ್ತು ಸರಕು ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮಂಡ್ಯದ ಕೆ.ಆರ್.ಎಸ್ ಮಾರ್ಗದಲ್ಲಿ ಸಂಚರಿಸುವ ಭಾರೀ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಸರಾ ಮಹೋತ್ಸವದ ವೇಳೆ ಕೆ.ಆರ್.ಎಸ್ ನ ಬೃಂದಾವನಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸಲಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತದ ಈ ನಿರ್ಧಾರ ಕೈಗೊಂಡಿದೆ. ಪ್ರತಿನಿತ್ಯ ಮಧ್ಯಾಹ್ನ 3ರಿಂದ ರಾತ್ರಿ 11ಗಂಟೆಯವರೆಗೂ ಭಾರೀ ವಾಹಗಳ ಸಂಚಾರಕ್ಕೆ ಅನುಮತಿ ನಿರಾಕರಿಸಿದೆ. ಅಕ್ಟೋಬರ್ 2ರವರೆಗೂ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಒಂದು ಕಮೆಂಟನ್ನು ಹಾಕಿ