ಟಿಟಿ ಡಿಕ್ಕಿ ಆಟೋ ಚಾಲಕ ಸಾವು !

Kannada News

25-09-2017

ಬೆಂಗಳೂರು: ನಗರದ ಲಗ್ಗೆರೆ ಮೇಲ್ಸೇತುವೆಯ ಸರ್ವೀಸ್ ರಸ್ತೆಯಲ್ಲಿ ನಿನ್ನೆ ಮಧ್ಯರಾತ್ರಿ ಎದುರಿನಿಂದ ವೇಗವಾಗಿ ಬಂದ ಟೆಂಪೋ ಟ್ರಾವೆಲರ್, ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಲಗ್ಗೆರೆಯ ಚೌಡೇಶ್ವರಿ ನಗರದ ಯೋಗೇಶ್ (35)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ರಾತ್ರಿ ವೇಳೆ ಆಟೋ ಓಡಿಸುತ್ತಿದ್ದ ಯೋಗೇಶ್ ರಾತ್ರಿ 1.30ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ ಸರ್ವೀಸ್ ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮೃತ ಯೋಗೇಶ್ ಗೆ ವಿವಾಹವಾಗಿದ್ದು, 3 ಹಾಗೂ 1 ವರ್ಷದ ಇಬ್ಬರು ಮಕ್ಕಳಿದ್ದಾರೆ. ಪ್ರಕರಣ ದಾಖಲಿಸಿರುವ ರಾಜಾಜಿನಗರ ಸಂಚಾರ ಪೊಲೀಸರು ಟೆಂಪೋ ಟ್ರಾವೆಲರ್ ಪತ್ತೆಹಚ್ಚಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ