ಕಾವೇರಿ ವಿವಾದ ಎಂ.ಬಿ ಪಾಟೀಲ್ ಸಭೆ !

Kannada News

26-09-2017 364

ಬೆಂಗಳೂರು: ರಾಜ್ಯದ ಕಾವೇರಿ ಹಾಗೂ ಮಹದಾಯಿ ಜಲ ವಿವಾದಗಳ ಮುಂದಿನ ನಡೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಚರ್ಚೆ ನಡೆಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಕಾವೇರಿ ವಿವಾದ ಕುರಿತು ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ವಾದ ವಿವಾದ ಮುಕ್ತಾಯವಾಗಿದ್ದು, ಸುಪ್ರೀಂಕೋರ್ಟ್‌ ರಾಜ್ಯಗಳಿಗೆ ಅಭಿಪ್ರಾಯ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿದ್ದು, ರಾಜ್ಯ ಸರ್ಕಾರ ರಾಜ್ಯದ ಹಿತದೃಷ್ಠಿಯಿಂದ ಯಾವ ಅಂಶಗಳನ್ನು ಸುಪ್ರೀಂಕೋರ್ಟ್‌ಗೆ ನೀಡಬೇಕೆಂಬ ಮಾಸ್ಟರ್‌ ನೋಟ್‌ ಸಿದ್ಧಪಡಿಸುವ ಕುರಿತು ಚರ್ಚಿಸಿದರು. ನಂತರ ರಾಜ್ಯ ವಕೀಲರ ತಂಡದ ಮುಖ್ಯಸ್ಥ ಫಾಲಿ ಎಸ್‌.ನಾರಿಮನ್‌ ಅವರ ನಿವಾಸಕ್ಕೆ ತೆರಳಿ ಅವರೊಂದಿಗೂ ಸಮಾಲೋಚನೆ ನಡೆಸಿದರು.

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ