ಮತ್ತಿನಲ್ಲಿ ಮಹಿಳೆ ಮೇಲೆ ದೌರ್ಜನ್ಯ !

Kannada News

26-09-2017

ಬೆಂಗಳೂರು: ಮಹಿಳೆಯುಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯು ಬೆಂಗಳೂರಿನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೇ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡು ದಿನಗಳ ಹಿಂದೆ, ದೊಮ್ಮಲೂರಿನ ಲವ್ ಶೇಖ್ ಪಬ್ ಗೆ ಯುವತಿಯೊಬ್ಬಳು ಬಂದಿದ್ದಳು. ಈ ವೇಳೆ ಕುಡಿದ ಮತ್ತಿನಲ್ಲಿದ್ದ, ಖಾಸಗಿ ಕಂಪನಿಯ ಸಿಇಒ, ಪಬ್ ಗೆ ಬಂದಿದ್ದ ಮಹಿಳೆ ಮೇಲೆ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮನೀಶ್ ಎಂದು ಈ ವ್ಯಕ್ತಿಯನ್ನು ಗುರುತಿಸಲಾಗಿದೆ. ಈ ಕುರಿತು ದೂರನ್ನು ಆಧರಿಸಿ, ಪೊಲೀಸರು ಈತನನ್ನು ಬಂಧಿಸಿದ್ದಾರೆ. ಕುಡಿದ ಅಮಲಿನಲ್ಲಿ ಈತ ಯುವತಿಯ ಮೇಲೆ ದೌರ್ಜನ್ಯವೆಸಗಿದ್ದು, ಘಟನೆ ಸಂಬಂಧ ಹಲಸೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ