ತುಮಕೂರಿನಿಂದ ಪರಿವರ್ತನಾ ಯಾತ್ರೆ !

Kannada News

26-09-2017 385

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ರಾಜ್ಯದಲ್ಲಿ ಎರಡು ಭಾಗದಿಂದ ಚಾಲನೆ ನೀಡಲು ಬಿಜೆಪಿ ತೀರ್ಮಾನಿಸಿದೆ.

ರಾಜ್ಯದ ಎಲ್ಲಾ 224 ವಿಧಾನಸಭೆ ಕ್ಷೇತ್ರದಲ್ಲಿ ಈ ಯಾತ್ರೆ ಸಾಗಲಿದೆ. ತುಮಕೂರಿನಲ್ಲಿ ನ.2ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಉತ್ತರ ಕರ್ನಾಟಕದ ಪ್ರತ್ಯೇಕ ರ‍್ಯಾಲಿಯನ್ನು ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಮಂಗಳೂರು ಚಲೋ ರ‍್ಯಾಲಿ ವೇಳೆ ಬೆಂಗಳೂರಿನ ಟ್ರಾಫಿಕ್ ದಟ್ಟಣೆಯ ಕಾರಣ ನೀಡಿ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿತ್ತು. ಹೀಗಾಗಿ ಬೆಂಗಳೂರಿನ ಬದಲು ತುಮಕೂರಿನಿಂದ ಯಾತ್ರೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ