ಉಪರಾಷ್ಟ್ರಪತಿಗೆ ರೈತರ ಮನವಿ !

Kannada News

26-09-2017 421

ಗದಗ್: ನೆನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ಮುಖ್ಯಮಂತ್ರಿಗಳ ಸಭೆ ಕರೆದು, ಪರಿಹಾರ ಕಂಡು ಹಿಡಿಯಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಬೇಕೆಂದು ರೈತ ಹೋರಾಟಗಾರರು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ, ಮನವಿ ಸಲ್ಲಿಸಿದ್ದಾರೆ. ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದ ಬಯಲು ಶೌಚಾಲಯ ಮುಕ್ತ ಘೋಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರನ್ನು ರೈತ ಮುಖಂಡರು ಭೇಟಿಯಾಗಿ ಮನವಿ ನೀಡಿದರು. ಕಳೆದ 2 ವರ್ಷಗಳಿಂದ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಬೀದಿಗಿಳಿದು ಹೋರಾಟ ಮಾಡುತ್ತಾ ಬಂದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಯೋಜನೆಯಿಂದ ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ರೈತರ ಲಕ್ಷಾಂತರ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯುತ್ತದೆ. ಕಾರಣ ರೈತರ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ ಶೀಘ್ರ ಸಭೆ ಕರೆಯುವಂತೆ ಮನವಿಯಲ್ಲಿ ತಿಳಿಸಲಾಗಿದೆ.

 

 



ಸಂಬಂಧಿತ ಟ್ಯಾಗ್ಗಳು

ಗದಗ್ ಉಪರಾಷ್ಟಪತಿಗೆ ರೈತರ ಮನವಿ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ