ಉಮಾಶ್ರೀ ವಿರುದ್ಧ ಸ್ಪರ್ಥಿಸ್ತಾರಾ ಬಿ.ಎಸ್.ವೈ..?

Kannada News

26-09-2017

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಘಟಾನುಘಟಿಗಳಿಗೆ ಕ್ಷೇತ್ರ ಬದಲಾವಣೆ ಮಾಡುವಂತೆ ಹೈಕಮಾಂಡ್ ಸೂಚಿಸಿದೆ ಎನ್ನುವ ಸುದ್ದಿಗಳ ನಡುವೆಯೇ ಹೊಸ ವಿಚಾರ ಬೆಳಕಿಗೆ ಬಂದಿದೆ.  ಈ ಪ್ರಕಾರ ಬಿಜೆಪಿ ಸಿ.ಎಂ.ಅಭ್ಯರ್ಥಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಪ್ರಸ್ತುತ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವೆಯಾಗಿರುವ ಉಮಾಶ್ರೀ ಅವರ ವಿರುದ್ಧ ಸ್ಪರ್ಧೆಗೆ ಬಿಎಸ್‍ವೈ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಯಡಿಯೂರಪ್ಪ ಅವರು ಸ್ಪರ್ಧಿಸುವುದು ಅಂತಿಮವಾಗಿದ್ದು, ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಮಾಜಿ ಶಾಸಕ ಸಿದ್ದು ಸವದಿ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಭರವಸೆ ನೀಡಲಾಗಿದೆ. 2013ರಲ್ಲಿ ಉಮಾಶ್ರೀ ಅವರು ಸಿದ್ದು ಸವದಿ ಅವರ ವಿರುದ್ಧ ಜಯಗಳಿಸಿ ಶಾಸಕಿಯಾಗಿ ಆಯ್ಕೆಯಾಗಿ ಸಚಿವೆಯಾಗಿದ್ದರು. ಕ್ಷೇತ್ರದಲ್ಲಿ ಲಿಂಗಾಯತ ಮತ್ತು ನೇಕಾರ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಲಿಂಗಾಯತ ಸಮುದಾಯದ ಪ್ರಬಲ ನಾಯಕ ಬಿಎಸ್ ವೈ ಮತ್ತು ನೇಕಾರ ಸಮುದಾಯದ ನಾಯಕಿ ಉಮಾಶ್ರೀ ನಡುವೆ ಪ್ರಬಲ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ