ದೊರೆಸ್ವಾಮಿಗೆ 'ಗಾಂಧಿ ಸೇವಾ ಪ್ರಶಸ್ತಿ' !

Kannada News

27-09-2017

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ನೀಡುವ, 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ' ಗೆ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ಆಯ್ಕೆಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಕಳೆದ ನಾಲ್ಕು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, 2017ನೇ ಸಾಲಿನ ಪ್ರಶಸ್ತಿಗೆ ಹೆಚ್.ಎಸ್.ದೊರೆಸ್ವಾಮಿ ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು, ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಕ್ಟೋಬರ್ 2 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 6.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ’ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆಮಾಡಲು ನಿವೃತ್ತ ನ್ಯಾಯಮೂರ್ತಿ ಶ್ರೀ ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿಗಳನ್ನು ಒಳಗೊಂಡಿದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ