ಹಬ್ಬಕ್ಕೆ ಮಳೆ ಸಂಕಷ್ಟ !

Kannada News

27-09-2017 197

ಮೈಸೂರು: ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನಿನ್ನೆ ಸುರಿದ ಮಳೆ ಹಲವೆಡೆ ಭಾರೀ ಅವಾಂತರ ಸೃಷ್ಟಿಸಿ, ಹೆಚ್ಚಿನ ಅನಾಹುತಗಳು ನಡೆದಿವೆ.

ನಗರದ ಹಲವೆಡೆ ಮರಗಳು ಮುರಿದು ಬಿದ್ದಿದ್ದು ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ಅಲೀಂ ನಗರದಲ್ಲಿ ಕಾಂಪೌಂಡ್ ಕುಸಿದು ನಾಲ್ವರಿಗೆ ಗಾಯಗಳಾಗಿವೆ. ಇನ್ನೊಂದೆಡೆ ಭಾರೀ ಮಳೆಗೆ ಸ್ಲಂ ಬೋರ್ಡ್ ಒಂದನೇ ಬ್ಲಾಕ್ ನಲ್ಲಿ ಮನೆಗಳು ಬಿರುಕು ಬಿಟ್ಟಿವೆ. ನಿವಾಸಿಗಳು ಕಟ್ಟಡ ಕುಸಿಯುವ ಆತಂಕದಲ್ಲಿದ್ದಾರೆ. ಇದೇ ರೀತಿ ಮೈಸೂರಿನ ಗುಂಡೂರಾವ್ ನಗರ, ಪಡುವಾರಹಳ್ಳಿ, ಗೌಸಿಯಾನಗರ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಹೂಟಗಳ್ಳಿಯ ಸೈಲೆಂಟ್ ಶೋರ್ ರೆಸಾರ್ಟ್ ಪಕ್ಕದ ಕೆರೆ ಒಡೆದು ಭಾರೀ ಹಾನಿ ಸಂಭವಿಸಿದೆ. ಮಳೆರಾಯನ ಆರ್ಭಟಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹೂಟಗಳ್ಳಿಯಲ್ಲಿ ಗೋಣಿ ಕೆರೆ ಒಡೆದು ಮನೆಗೆ ನೀರು ನುಗ್ಗಿದೆ. ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮೈಸೂರಿನ ಕನಕಗಿರಿ, ಗುಂಡೂರಾವ್ ನಗರ ಕೆರೆಯಂತಾಗಿದೆ.ಸಂಬಂಧಿತ ಟ್ಯಾಗ್ಗಳು

ಮೈಸೂರು ಮೈಸೂರಲ್ಲಿ ಮಳೆಯ ಹಬ್ಬ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ