ಬಿಜೆಪಿ ಅಧಿಕಾರಕ್ಕೆ ಬರಲಿದೆ

Kannada News

27-09-2017

ಚಾಮರಾಜನಗರ: 2018ರ ವಿಧಾನಸಭಾ ಚುನಾವಣೆಯಲ್ಲಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ನುಡಿದಿದ್ದಾರೆ. ಚಾಮರಾಜ ನಗರದಲ್ಲಿಂದು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ನೀಡುವುದರಲ್ಲಿ ಅನುಮಾನ ಇಲ್ಲ, ಆದ್ದರಿಂದ ಕಾರ್ಯಕರ್ತರು ತಮ್ಮ ಊರುಗಳಲ್ಲಿ ತಮ್ಮದೇ ಆದ ಪ್ರಭಾವ ಬೀರುವುದು, ಜೊತೆಯಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿ ಕೊಡುವ ಮೂಲಕ, ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ