ಕರೆಂಟ್ ಶಾಕ್ ಮಹಿಳೆ ಸಾವು !

Kannada News

27-09-2017

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವವೆಡೆ ವರುಣ ಅಬ್ಬರಿಸಿದ್ದಾನೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕಳೆದ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯಿಂದ ವಿದ್ಯುತ್ ತಗುಲಿ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕೆ.ಆರ್.ಪುರಂ ನ ಆರ್.ಎಂ.ಎಸ್ ಬಡಾವಣೆಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಆರ್.ಎಂ.ಎಸ್ ಬಡಾವಣೆಯ ಜೋಷ್ ಮೀನಮ್ಮ ಎಂದು ಗುರುತಿಸಲಾಗಿದೆ. ರಾತ್ರಿ ಸುರಿಯುತ್ತಿದ್ದ ಮಳೆಯ ನೀರು ಮನೆಗೆ ನುಗ್ಗಿದ ವೇಳೆ ಯುಪಿಎಸ್ ಸ್ವಿಚ್ ಆಫ್ ಮಾಡಲು ಹೋದಾಗ ವಿದ್ಯುತ್ ತಗುಲಿ ಮೀನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರ್.ಎಂ.ಎಸ್. ಬಡಾವಣೆಯ ಸಮೀಪದ ಐಟಿಸಿ ಕಾಲೋನಿಯಲ್ಲಿ ಮಳೆಯಿಂದ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ಟಿವಿ ಡಿವಿಡಿ ಇನ್ನಿತರ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಸ್ಥಳಕ್ಕೆ ಧಾವಿಸಿದ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ. ಸ್ಥಳಕ್ಕೆ ಧಾವಿಸಿರುವ ಕೆ.ಆರ್.ಪುರಂ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ