ಮಳೆಗೆ ಹೆದ್ದಾರಿ ಜಲಾವೃತ !

Kannada News

27-09-2017

ಬೆಂಗಳೂರು: ಭಾರೀ ಮಳೆಗೆ ನೆಲಮಂಗಲ ತಾಲ್ಲೂಕಿನ ಅಮಾನಿಕೆರೆ, ಬಿನ್ನಮಂಗಲ, ದಾಸನಪುರ ಕರೆಗೆಗಳು ಭರ್ತಿಯಾಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ. ರಸ್ತೆಯ ಮೇಲೆ ಸುಮಾರು ಮೂರು ಅಡಿ ನೀರು ನಿಂತಿದ್ದು, ನೀರಿನ ರಭಸಕ್ಕೆ ಹಲವು ಅಂಗಡಿಗಳು ಕೊಚ್ಚಿ ಹೋಗಿವೆ. ರಸ್ತೆ ದಾಟಲಾಗದೆ ವಾಹನ ಸವಾರರು ಪರದಾಟ ಅನುಭವಿಸುತ್ತಿದ್ದಾರೆ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‍ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸ್ಥಳೀಯ ಜನರು ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಅಲ್ಲದೇ ಮಳೆಯ ಅರ್ಭಟಕ್ಕೆ ನೆಲಮಂಗಲ ಸಮೀಪದ ಹಿಮಾಲಯ ಡ್ರಗ್ ಕಂಪನಿಯ ಒಳ ಕಾಂಪೌಂಡ್ ಕುಸಿತವಾಗಿದೆ. ಬಿನ್ನಮಂಗಲ ಕೆರೆ ಕೋಡಿ ಒಡೆದ ಪರಿಣಾಮ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಿಂದ ಕಂಪನಿಯ ಒಳಗೆ ನೀರು ಹರಿದುಬಂದಿದೆ. ಕಂಪನಿಯ ಕೆಲವು ಸ್ಥಳಗಳು ಜಲಾವೃತಗೊಂಡಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ