ಚಮಚಾಗಿರಿ ಮಾಡವವರು ಮಾತ್ರ ಬೇಕು..!

Kannada News

28-09-2017

ಬೆಂಗಳೂರು: ಕಾಂಗ್ರೆಸ್ ಪಕ್ಷದ ಇನ್ನೂ ಸಾಕಷ್ಟು ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಹೊರನಡೆಯಲಿದ್ದಾರೆ ಎಂದು, ಕೈ ತೊರೆದು ಜೆಡಿಎಸ್ ಸೇರಿರುವ ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಈಗ ಮುತ್ಸದ್ದಿಗಳು, ಹಿರಿಯರು ಬೇಕಾಗಿಲ್ಲ. ಚಮಚಾಗಿರಿ ಮಾಡುವವರು ಮಾತ್ರ ಬೇಕಾಗಿದ್ದಾರೆ. ಹಾಗಾಗಿ ನಮ್ಮಂತವರು ಪಕ್ಷದಲ್ಲಿ ಇರಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ರಾಜೀನಾಮೆ ನೀಡುವ ಮೂಲಕ ಈಗಲಾದರೂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ನರೇಂದ್ರ ಬಾಬು ನಿರ್ಧಾರವನ್ನು ಸ್ವಾಗತಿಸಿದರು.

ರಾಜ್ಯದಲ್ಲಿ ಇರೋದು ಕಾಂಗ್ರೆಸ್ ಸರ್ಕಾರವಲ್ಲ, ಸಿದ್ದರಾಮಯ್ಯ ಸರ್ಕಾರ. ಚುನಾವಣೆ ಸಮೀಪಿಸುತ್ತಿರುವಾಗ ಈ ಬೆಳವಣಿಗೆ ನಡೆಯುತ್ತಿರುವುದು ಕೈ ಪಾಳಯದ ಪರಿಸ್ಥಿತಿಯನ್ನು ತೋರಿಸುತ್ತದೆ. ನಾವು ಅವರಿಗೆ ಕೈ ಕೊಟ್ಟಿಲ್ಲ, ಕೈ ಕೊಡುವವರು ಕಾಂಗ್ರೆಸ್ ಪಕ್ಷದ ಒಳಗಡೆಯೇ ಇದ್ದಾರೆ. ಪಕ್ಷದ ನಾಯಕತ್ವದಲ್ಲೇ ಇದ್ದಾರೆ ಎಂದು ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ