ನಾಳೆ ಎಚ್ಡಿಕೆ ಆಸ್ಪತ್ರೆಯಿಂದ ಮನೆಗೆ..?

Kannada News

28-09-2017

ಬೆಂಗಳೂರು: ನಗರದ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡಿದ್ದು, ನಾಳೆ ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡುವ ಸಂಭವವಿದೆ. ಕಳೆದ ನಾಲ್ಕು ದಿನಗಳ ಹಿಂದೆ ಎಚ್.ಡಿ.ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಮಾರಸ್ವಾಮಿ ಕುಟುಂಬ ಸಮೇತ ಸಿಂಗಾಪುರಕ್ಕೆ ಹೋಗಲಿದ್ದಾರೆ. ಸುಮಾರು 15 ದಿನ ಅವರು ಕುಟುಂಬದವರೊಂದಿಗೆ ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ವೈದ್ಯರ ಸೂಚನೆ ಮೇರೆಗೆ ವಿದೇಶಕ್ಕೆ ತೆರಳಲು ಹೆಚ್‍ಡಿಕೆ ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ