ಬೈಕ್ ಕಳ್ಳನ ಸೆರೆ !

Kannada News

28-09-2017

ಬೆಂಗಳೂರು: ನಕಲಿ ಕೀ ಬಳಸಿ, ಇಲ್ಲವೆ ಹ್ಯಾಂಡಲ್ ಲಾಕ್ ಮುರಿದು ಬೈಕ್ ಗಳನ್ನು ಕಳವು ಮಾಡುತ್ತಿದ್ದ, ಗೋವಿಂದಶೆಟ್ಟಿ ಪಾಳ್ಯದ ಸೈಯದ್ ನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿ 5 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಗ್ರಾಮಾಂತರ ಪ್ರದೇಶದ ಒಂಟಿ ಮನೆಗಳ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಕಳವು ಮಾಡಿ ಐಷಾರಾಮಿ ಜೀವನ ನಡೆಸುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಯ ಬಂಧನದಿಂದ 8 ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಡಿಸಿಪಿ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಬೈಕ್ ಕಳ್ಳನ ಸೆರೆ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ