ದೇವರಿಗೆ ದೇಣಿಗೆ: ಗುಂಪು ಘರ್ಷಣೆ !

Kannada News

03-10-2017

ಬಾಗಲಕೋಟೆ: ದೇವರಿಗೆ ದೇಣಿಗೆ ಕೊಡುವ ವಿಚಾರದಲ್ಲಿ ತಕರಾರು ಏರ್ಪಟ್ಟು, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆಯು, ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಇನ್ನು ಘರ್ಷಣೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದಾಟ ಉಂಟಾದ್ದರಿಂದ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲೆಯ ಇಳಕಲ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಇಳಕಲ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬೀಡು ಬಿಟ್ಟಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ