ಅಪಘಾತ: ಒಂದು ವರ್ಷದ ಮಗು ಸಾವು !

Kannada News

03-10-2017

ಉಡುಪಿ: ಮಣಿಪಾಲ ಹಾಗೂ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬಳಿ ನಿನ್ನೆ ಅಪಘಾತವೊಂದು ಸಂಭವಿಸಿದ್ದು, ಒಂದು ವರ್ಷದ ಮಗು ಸಾವನ್ನಪ್ಪಿದೆ. ಮಣಿಪಾಲದಿಂದ ಹಿರಿಯಡ್ಕಗೆ ದಂಪತಿ ಬೈಕ್‍ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿದ್ದ ಗುಂಡಿಗಳನ್ನು ತಪ್ಪಿಸಲು ಹೋದಾಗ ಬೈಕ್‍ ನಲ್ಲಿದ್ದ ಮಗು ಕೆಳಕ್ಕೆ ಬಿದ್ದಿದೆ. ಈ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡ ಒಂದು ವರ್ಷದ ಚಿರಾಗ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಣಿಪಾಲ ಹಾಗೂ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಮಾರ್ಗವು ತೀರ ಕಿರಿದಾಗಿದ್ದು, ಕಳೆದ 10 ವರ್ಷಗಳಿಂದ ರಸ್ತೆ ಅಗಲೀಕರಣ ಕಾರ್ಯ ನಡೆಯುತ್ತಿದೆ. ಇದರಿಂದ ರಸ್ತೆಯಲ್ಲಿ ದೊಡ್ಡ ಹಳ್ಳಗಳು ನಿರ್ಮಾಣವಾಗಿದೆ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸ್ಥಳೀಯ ಸಂಘಟನೆಗಳು ಹೋರಾಟಗಳನ್ನು ಮಾಡಿ ಒತ್ತಾಯ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ಅಪಘಾತ ನಡೆದ ಸ್ಥಳದಲ್ಲಿ ಸ್ಥಳೀಯ ಸಂಘಟನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯಕ್ಕೆ ಪ್ರತಿಭಟನೆ ನಡೆಸಿದ್ದು, ಸರ್ಕಾರ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಈ ಸಾವು ಸಂಭವಿಸಿದೆ. ಇದೊಂದು ಸರ್ಕಾರದ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

ಉಡುಪಿ ಅಪಘಾತ ಒಂದು ವರ್ಷದ ಮಗು ಸಾವು !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ