ಹೊಸ ಪಕ್ಷ ಕಟ್ಟಲಿದ್ದಾರೆ ಶಣೈ..?

03-10-2017 393
ಉಡುಪಿ: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ. ಅಷ್ಟೇ ಅಲ್ಲದೆ ಅವರು ಹೊಸ ಪಕ್ಷವೊಂದನ್ನು ಕಟ್ಟಲು ಮುಂದಾಗಿದ್ದಾರೆ. ಸಮಾನ ಮನಸ್ಕರೊಂದಿಗೆ ಅನುಪಮಾ ಮಾತುಕತೆ ನಡೆಸಿದ್ದು, ಒಂದು ತಿಂಗಳೊಳಗೆ ಎಲ್ಲರಿಂದ ಅಭಿಪ್ರಾಯ ಪಡೆದು ತಜ್ಞರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ರಾಜಕೀಯಕ್ಕೆ ಭ್ರಷ್ಟತೆ ಸಂಪೂರ್ಣ ಆವರಿಸಿಕೊಂಡಿದೆ. ಗಾಂಧೀಜಿಯ ಗ್ರಾಮ ಸ್ವರಾಜ್ಯ ಕನಸನ್ನು ನನಸು ಮಾಡಬೇಕಿದೆ, ಈ ಹಿನ್ನೆಲೆ ಮೊದಲ ಸುತ್ತಿನ ಮಾತುಕತೆ ನಡೆದಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ನೇರವಾಗಿ ಹಂಚಿಕೊಳ್ಳಬಹುದು ಎಂದು ಉಡುಪಿಯ ಉಚ್ಚಿಲದಲ್ಲಿ ಅನುಪಮಾ ಶೆಣೈ ಹೇಳಿಕೆ ನೀಡಿದ್ದಾರೆ.
ಒಂದು ಕಮೆಂಟನ್ನು ಹಾಕಿ