ಮಂಗಳೂರು ಬಿಟ್ಟು ನಡೆದ ಷಾ !

Kannada News

04-10-2017

ಮಂಗಳೂರು: ದೆಹಲಿಯಲ್ಲಿ ಬಿಜೆಪಿ ಕೋರ್ ಸಮಿತಿ ಜೊತೆ ತುರ್ತು ಸಭೆ ಹಿನ್ನೆಲೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅಮಿತ್ ಷಾ ಅವರು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ದೆಹಲಿಯಲ್ಲಿ ತುರ್ತು ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅಮಿತ್ ಷಾ ಅವರು ರಾತ್ರಿಗೆ ದೆಹಲಿಗೆ ಪ್ರಯಾಣಿಸಲಿದ್ದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸಜೀವ್ ಮಟಂದೂರ್ ಹೇಳಿದ್ದಾರೆ.

ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ಅಮಿತ್ ಷಾ ಅವರು ವೈದ್ಯರು, ವಕೀಲರು ಹಾಗೂ ವೃತ್ತಿಪರರು ಸೇರಿದಂತೆ 2 ಸಾವಿರ ಮಂದಿ ಜೊತೆ ಮಾತುಕತೆ ನಡೆಸಬೇಕಿತ್ತು. ಈಗಾಗಲೇ 1800 ಮಂದಿ ನೋಂದಾಯಿಸಿಕೊಂಡಿದ್ದರು. ಆದರೆ ದಿಢೀರ್ ಬೆಳವಣಿಗೆಯಿಂದ ಅಮಿತ್ ಷಾ ಅವರ ಮಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ