‘ಲಂಡನ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌’ ಪ್ರಾರಂಭೋತ್ಸವ !

Kannada News

04-10-2017

ಬೆಂಗಳೂರು: ಲಂಡನ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಮಾದರಿಯಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಿರುವ ಡಾ||ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ನ ಶೈಕ್ಷಣಿಕ ಪ್ರಾರಂಭೋತ್ಸವಕ್ಕೆ ಇಂದು ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ವಸಂತನಗರದ ಅಂಬೇಡ್ಕರ್‌ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌.ಬಿ.ಐ ನಿವೃತ್ತ ಗವರ್ನರ್‌ ಡಾ.ಸಿ.ರಂಗರಾಜನ್‌, ಲೋಕಸಭೆ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉನ್ನತ ಶಿಕ್ಷಣ ಸಚಿವ ಬಸವರಾಜರಾಯರಡ್ಡಿ ಭಾಗವಹಿಸಲಿದ್ದಾರೆ. ಸ್ವಾಯತ್ತ ಸಂಸ್ಥೆಯಾಗಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 300 ಕೋಟಿ ರೂ.ವೆಚ್ಚದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್ ನ ರಚನೆ ಮಾಡಿದೆ. 2017-18ನೇ ಸಾಲಿನಲ್ಲಿ 50 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಬೆಂಗಳೂರು ವಿವಿ ಕ್ಯಾಂಪಸ್‌ ನಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಿಸಿದ್ದಾರೆ.

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ