ಎಚ್ಡಿಕೆ ಮನೆಯಲ್ಲಿ ಬೆಂಕಿ ಅವಘಡ ! 

Kannada News

04-10-2017

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಹುಬ್ಬಳ್ಳಿ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಮಾಯಕಾರ ಕಾಲೋನಿಯಲ್ಲಿರುವ ಮನೆಯಲ್ಲಿ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ, ಅವಘಡ ನಡೆದು, ಮನೆಯಲ್ಲಿನ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.

ಬೆಂಕಿ ತಗುಲಿ ಎರಡು ಸೋಫಾ ಸೆಟ್ ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಬೆಡ್ ರೂಮಿಗೂ ಬೆಂಕಿ ಆವರಿಸಿದ್ದರಿಂದ ಅಲ್ಲಿನ ಕೆಲ ವಸ್ತುಗಳು ಸಹ ಬೆಂಕಿಗೆ ಆಹುತಿಯಾಗಿವೆ. ಮನೆಯ ಕೆಲಸಗಾರರು ಮತ್ತು ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಕೆಲಸಗಾರರು ಮನೆಯ ಮುಂದಿನ ಕಚೇರಿಯಲ್ಲಿ ಮಲಗಿದ್ದರಿಂದ ಭಾರೀ ಅನಾಹುತ ತಪ್ಪಿದೆ‌.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ