ಪ್ರತಿತಂತ್ರಕ್ಕೆ ವಿಶೇಷ ಶಾಸಕಾಂಗ ಸಭೆ

Kannada News

04-10-2017 423

ಬೆಂಗಳೂರು: ಬಿಜೆಪಿ ಚುನಾವಣಾ ತಂತ್ರಕ್ಕೆ, ಪ್ರತಿತಂತ್ರ ಹೆಣೆಯುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಅಕ್ಟೋಬರ್ 6ರಂದು ವಿಶೇಷ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಎಲ್ಲ ಶಾಸಕರು ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡು, ತಮ್ಮ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳು ಹಾಗೂ ಅಮೂಲ್ಯ ಸಲಹೆಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಅಕ್ಟೋಬರ್ 6ರಂದು. ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರೂ ಪಾಲ್ಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಚುನಾವಣೆ ಹೊಸ್ತಿಲಿನಲ್ಲಿರುವ ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಭರ್ಜರಿ ಸಿದ್ಧತೆ, ಕಾರ್ಯತಂತ್ರಗಳನ್ನು ಹೆಣೆಯುತ್ತಿವೆ.

ಇದಕ್ಕೆ ಪ್ರತಿತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷ ವಿಶೇಷ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಪಕ್ಷ ಸಂಘಟನೆ, ಮುಂದೆ ಕೈಗೊಳ್ಳಬೇಕಾದ ರೂಪುರೇಷೆಗಳ ಬಗ್ಗೆಯೂ ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಹಲವು ಸಚಿವರು, ಶಾಸಕರು ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಗರಂ ಆಗಿರುವ ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ 6ರಂದು ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ.

 

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ