ಅಕ್ರಮ ಮೀನುಗಾರಿಕೆ: 2 ದೋಣಿ ವಶ !

Kannada News

04-10-2017 411

ಮಂಗಳೂರು: ಆಳ ಸಮುದ್ರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಎರಡು ಮೀನುಗಾರಿಕಾ ದೋಣಿಗಳನ್ನು ಭಾರತೀಯ ತಟ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಕೋಸ್ಟ್ ಗಾರ್ಡ್ ಶಿಪ್ ಸಿ-420 ಸಮುದ್ರದಲ್ಲಿ ಪಹರೆ ನಡೆಸುತ್ತಿದ್ದ ಸಂದರ್ಭದಲ್ಲಿ, ಎರಡು ಮೀನುಗಾರಿಕಾ ದೋಣಿಗಳು ಅಕ್ರಮವಾಗಿ ಬುಲ್ ಟ್ರಾಲಿಂಗ್ ಮೀನುಗಾರಿಕೆ ನಡೆಸುತ್ತಿರುವುದು ಕಂಡುಬಂದಿದೆ ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಡಗು, ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಸಾಗರ್ ಕುಸುಮ್ ಹಾಗು ಸಾಗರ್ ಕುಸುಮ್ (ವಿ) ಹೆಸರಿನ 2 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಮೀನುಗಾರಿಕಾ ದೋಣಿಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಅಧಿಕೃತ ದಾಖಲೆಗಳು ಇರಲಿಲ್ಲ. ಹಾಗೂ ಮೀನುಗಾರಿಕಾ ದೋಣಿಯಲ್ಲಿದ್ದವರಲ್ಲಿ ಸರಿಯಾದ ಗುರುತಿನ ಚೀಟಿಗಳು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ