ನನಗೆ ಸಂಸದನಾಗುವ ಕನಸಿದೆ !

Kannada News

04-10-2017

ಚಿತ್ರದುರ್ಗ: ನನಗೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದನಾಗುವ ಕನಸಿದೆ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ತಮ್ಮ ಮನದಾಸೆಯನ್ನು ಹೊರಹಾಕಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಜನ ಸ್ಪರ್ಧಾಕಾಂಕ್ಷಿಗಳಿದ್ದಾರೆ. ನಾನು ಕೂಡ ಅವಕಾಶ ಸಿಕ್ಕರೆ ಸ್ಪರ್ಧಿಸುವೆ. ವರಿಷ್ಠರು ಹೇಳಿದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಆಚಾರ್ ಸುದ್ದಿಗಾರರಿಗೆ ತಿಳಿಸಿದರು.

ಇದೇ ವೇಳೆ ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ವಿವಾದವನ್ನು ಪ್ರಸ್ತಾಪಿಸಿದ ಅವರು, ನಾನು ಈಗಾಗಲೇ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವರು ಹಾಗೂ ಶಾಸಕರೊಂದಿಗೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು ಬಗೆಹರಿಯಲಿದೆ ಎಂದು ತಿಳಿಸಿದರು. ಜನಪ್ರತಿನಿಧಿಗಳ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತೆ ನಗರದ ಬಾಲಕಿಯೊಬ್ಬಳು ಜಿಲ್ಲಾ ಉಸ್ತುವಾರಿ ಸಚಿವರ ಎದುರು ಪ್ರಸ್ತಾಪಿಸಿರುವುದು ಶ್ಲಾಘನೀಯ. ಜನಪ್ರತಿನಿಧಿಗಳು, ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ ಅವುಗಳ ಪರಿಸ್ಥಿತಿ ಸುಧಾರಣೆಯಾದೀತು ಎಂದರು. ಈ ಬಗ್ಗೆ ಸಚಿವ ಆಂಜನೇಯ ಅವರ ಗಮನ ಸೆಳೆದ ಬಾಲಕಿಯನ್ನು ಭೇಟಿ ಮಾಡಲು ನಾನು ಚಿತ್ರದುರ್ಗಕ್ಕೆ ಬಂದಿದ್ದೇನೆ. ಆ ಬಾಲಕಿಯನ್ನು ಭೇಟಿ ಮಾಡಿ, ಧನ್ಯವಾದ ಹೇಳಿ ಹೋಗಬೇಕು ಮತ್ತು ಜನಪ್ರತಿನಿಧಿಗಳ ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಆಕೆಗೆ ಭರವಸೆ ನೀಡಬೇಕು ಎಂಬುದು ನನ್ನ ಉದ್ದೇಶ ಎಂದು ರಘು ಆಚಾರ್ ಹೇಳಿದರು.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ