ಕೊರಟಗೆರೆಯಿಂದ ಸ್ಪರ್ಧೆಗೆ ಸಿದ್ಧ !

Kannada News

04-10-2017

ಬೆಂಗಳೂರು: 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು, ತುಮಕೂರಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮುಂದಿನ ಚುನಾವಣೆಯಲ್ಲಿ ಶತಾಯ-ಗತಾಯ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬ ಸಂಕಲ್ಪ ಮಾಡಿರುವ ಪರಮೇಶ್ವರ್‌ ಅವರು, ಕೊರಟಗೆರೆಯಿಂದ ಸ್ಪರ್ಧೆಗಿಳಿಯಲು ಉತ್ಸುಕರಾಗಿದ್ದು, 2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸುಧಾಕರ್ ಲಾಲ್ ವಿರುದ್ಧ ಸೋಲು ಅನುಭವಿಸಿದ್ದ ಪರಮೇಶ್ವರ್ ಅವರು, ಅದೇ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

ಜಿಲ್ಲೆಯ ಮುಖಂಡರು ವಿಶೇಷವಾಗಿ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಪರಮೇಶ್ವರ್‌ ರವರು ಕೊರಟಗೆರೆಯಿಂದಲೇ ಸ್ಪರ್ಧಿಸಬೇಕು ಎಂಬ ಒತ್ತಾಯವನ್ನು ಮಾಡುತ್ತಿದ್ದು, ಅವರ ಒತ್ತಡಕ್ಕೆ ಮಣಿದಿರುವ ಪರಮೇಶ್ವರ್, ಮುಂದಿನ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ. ಕ್ಷೇತ್ರದಾದ್ಯಂತ ಕಾಂಗ್ರೆಸ್ ಪರ ಒಲವು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರಿಗೆ ಗೆಲುವಿನ ವಾತಾವರಣ ಇದೆ ಎಂಬ ವಿಶ್ವಾಸ ಮೂಡಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ