ಸಿದ್ದು ವಿರುದ್ಧ ವಿಶ್ವ ರೆಡಿ !

Kannada News

05-10-2017

ತುಮಕೂರು: ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು  ಮಾಜಿ ಸಂಸದ, ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಬಾಂಬ್ ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 224 ಕ್ಷೇತ್ರಗಳ ಪೈಕಿ ಎಲ್ಲೇ ನಿಂತರೂ ಗೆಲ್ಲುತ್ತೇನೆ ಎಂದು ಹೇಳುತ್ತಿದ್ದರು. ಇದೀಗ ಎರಡು ಕ್ಷೇತ್ರಕ್ಕೆ ಬಂದಿದ್ದಾರೆ, ಮುಂದೆ ಒಂದು ಕ್ಷೇತ್ರಕ್ಕೆ ಬಂದಿದ್ದು, ಚುನಾವಣೆ ವೇಳೆಗೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧಿಸುವುದಿಲ್ಲ ಎಂದರು.

ಸಿದ್ದರಾಮಯ್ಯ ಅವರಿಗೆ ಮುಂದೆ ಏನಾಗುತ್ತದೆ ಎಂಬುದು ತಿಳಿಯುತ್ತದೆ. ಹಾಗಾಗಿ ಅವರು 2018ರ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಜಿ.ಟಿ.ದೇವೇಗೌಡ ಅವರಿಗೆ ಹೆದರಿಸುತ್ತಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಇವರು ಎಲ್ಲೂ ನಿಲ್ಲುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಮುಖ್ಯಮಂತ್ರಿ ಸಮಾಜದಲ್ಲಿನ ಜಾತಿಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ದಲಿತ ಸಮುದಾಯವನ್ನು, ಇದೀಗ ತನ್ನ ನೇತೃತ್ವದಲ್ಲಿ ಚುನಾವಣೆ ಎಂದು ಹೇಳುವ ಮೂಲಕ ಪರಮೇಶ್ವರ್ ಅವರನ್ನು ದೂರ ಮಾಡುತ್ತಿದ್ದಾರೆ. ಹಾಗೆಯೇ ಲಿಂಗಾಯತ ಸಮುದಾಯವನ್ನು ಒಡೆಯುತ್ತಿದ್ದಾರೆ, ಈಗಾಗಲೇ ಒಕ್ಕಲಿಗ ಸಮುದಾಯ ಒಡೆದಿದ್ದಾರೆ. ಇದೀಗ ಕುರುಬ ಸಮಾಜ ಒಡೆಯಲು ಮುಂದಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ