ನೇಣಿಗೆ ಶರಣಾದ ಮೆಟ್ರೋ ನೌಕರ !

Kannada News

05-10-2017

ಬೆಂಗಳೂರು: ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಮೆಟ್ರೋ ಸಿಬ್ಬಂದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆಯ ಮೆಟ್ರೋ ವಸತಿ ಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೆಟ್ರೋ ನೌಕರ ಸಂತೋಷ್(25)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ಸಂತೋಷ್ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು. ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬಂದಿದೆ.

ಮೆಟ್ರೋ ಸಿಬ್ಬಂದಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮೆಟ್ರೋ ಆಡಳಿತ ಮಂಡಳಿ ವಿರುದ್ಧ ಮೆಟ್ರೋ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ