ಎಲ್ಲಾ ಬಿಚ್ಚಿಡ್ತೀವಿ: ಯಡ್ಡಿ

Kannada News

05-10-2017

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನಡೆಸಿರುವ ಬೃಹತ್ ಹಗರಣವನ್ನು ಶೀಘ್ರದಲ್ಲೇ ಬಯಲು ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಬಿ.ಜಿ.ಪುಟ್ಟಸ್ವಾಮಿ ಅವರು ಸದ್ಯದಲ್ಲೇ ಪತ್ರಿಕಾಗೋಷ್ಠಿ ಕರೆದು ಸರ್ಕಾರದ ಹಗರಣವನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡಲಿದ್ದಾರೆ. ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಸರ್ಕಾರದ ಮುಖವಾಡ ಕಳಚಲಿದ್ದೇವೆ ಎಂದು ಎಚ್ಚರಿಸಿದರು.

ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಂದಿನ ಮೂರು ದಿನಗಳಲ್ಲಿ ಸರ್ಕಾರದ ಒಂದೊಂದೇ ಹಗರಣವನ್ನು ಬಯಲು ಮಾಡಲಾಗುವುದು. ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರ ಭ್ರಷ್ಟಾಚಾರವನ್ನು ಸಾರ್ವಜನಿಕರ ಮುಂದಿಡಲಿದ್ದೇವೆ ಎಂದರು. ಭ್ರಷ್ಟಾಚಾರ ನಿಗ್ರಹ ದಳ ನಿಜವಾಗಿಯೂ ಭ್ರಷ್ಟರ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾರೂ ಮಾತನಾಡುತ್ತಾರೋ ಅಂತಹವರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುವ ಸಂಸ್ಥೆಯಾಗಿದೆ. ಆದ್ದರಿಂದಲೇ ಎಸಿಬಿಯಲ್ಲಿ ಎಷ್ಟೇ ದೂರುಗಳು ದಾಖಲಾದರೂ ಯಾರ ವಿರುದ್ಧವೂ ಕ್ರಮ ಜರುಗಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ