ಬೆಂಕಿಯಲ್ಲಿ ಬೆಂದು ಮಹಿಳೆ ಸಾವು !

Kannada News

05-10-2017

ಬೆಂಗಳೂರು: ಯಶವಂತಪುರದ ಲಕ್ಷ್ಮಿನಾರಾಯಣ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ಎರಡನೇ ಮಗುವಿನ ಹೆರಿಗೆ ನಂತರ ಸನ್ನಿಗೊಳಗಾಗಿದ್ದ, ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಇಂಜಿನಿಯರ್ ಆಗಿದ್ದ ಶಿವಲಿಂಗಪ್ಪ ಅವರ ಪತ್ನಿ ವೀಣಾ (31)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ಆರು ವರ್ಷಗಳ ಹಿಂದೆ ಇಂಜಿನಿಯರ್ ಆಗಿದ್ದ ವೀಣಾ, ಶಿವಲಿಂಗಪ್ಪ ಅವರನ್ನು ವಿವಾಹವಾಗಿದ್ದರು. ದಂಪತಿಗೆ 4 ವರ್ಷದ ಗಂಡುಮಗು ಹಾಗೂ 9 ತಿಂಗಳ ಹೆಣ್ಣುಮಗುವಿದೆ.

ಹೆಣ್ಣುಮಗು ಜನಿಸಿದ ನಂತರ ಸನ್ನಿಗೊಳಗಾಗಿದ್ದ ವೀಣಾ ವಿಚಿತ್ರವಾಗಿ ವರ್ತಿಸುತ್ತಿದ್ದು, ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತಾದರೂ ಆಕೆಯ ಸ್ಥಿತಿ ಸುಧಾರಿಸಿರಲಿಲ್ಲ. ಇಂದು ಬೆಳಿಗ್ಗೆ 6ರ ವೇಳೆ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಕೊಠಡಿಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತೀವ್ರ ಅಸ್ವಸ್ಥರಾಗಿದ್ದ ವೀಣಾ ಅವರನ್ನು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಯಶವಂತಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ