ಸಿದ್ದುಗೆ ವಿಶ್ವನಾಥ್ ಸವಾಲ್

Kannada News

06-10-2017

ಮೈಸೂರು: ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅಲ್ಲಾ ಸ್ವತಃ ಸಿದ್ದರಾಮಯ್ಯನವರೇ ಬರಲಿ. ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾರೇ ಸ್ಪರ್ಧಿಸಿದರೂ ನಾವೇ ಗೆಲ್ಲುತ್ತೇವೆ ಎಂದು ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು ಸಿ.ಎಚ್.ವಿಜಯಶಂಕರ್ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದು, ಹುಣಸೂರು ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದರು ಜೆಡಿಎಸ್ ಗೆಲವು ಸಾಧಿಸುವುದು ಖಚಿತ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಲ್ಲಿದ್ದಾಗ ಬಿಜೆಪಿ ಸೀಮೆ ಎಣ್ಣೆ, ಕಾಂಗ್ರೆಸ್ ಬೆಂಕಿ ಪೊಟ್ಟಣ ಎಂದು ಹೇಳಿದ್ದರು. ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಸೀಮೆ ಎಣ್ಣೆ ಹಾಗೂ ಬೆಂಕಿ ಎರಡು ಸಿಎಂ ಸಿದ್ದರಾಮಯ್ಯ ಅವರೇ ಆಗಿದ್ದಾರೆ ಎಂದು ಹರಿಹಾಯ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ