ಷರತ್ತುಬದ್ಧ ಎತ್ತಿನ ಹೊಳೆ !

Kannada News

07-10-2017

ಪಶ್ಚಿಮಘಟ್ಟದಲ್ಲಿ ಹರಿಯುವ ನೇತ್ರಾವತಿ ನದಿಯ ಉಪನದಿಗಳ ನೀರನ್ನು ತಿರುಗಿಸಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆ ರದ್ದುಗೊಳಿಸಬೇಕೆಂಬ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್​ಜಿಟಿ) ವಜಾಗೊಳಿಸಿದ್ದು, ಯೋಜನೆ ಅನುಷ್ಠಾನಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಈ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣ ತನ್ನ ನಿಲುವೇನು ಎಂಬ ಸಂಕ್ಷಿಪ್ತ ತೀರ್ಪನ್ನಷ್ಟೇ ಹೊರಹಾಕಿದ್ದು, ಷರತ್ತುಗಳನ್ನೊಳಗೊಂಡ ತೀರ್ಪನ್ನು ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ.

ಯೋಜನೆ ವಿರೋಧಿಸಿ ಸಾಮಾಜಿಕ ಹೋರಾಟಗಾರ ಕೆ.ಎನ್.ಸೋಮಶೇಖರ್ ಅರ್ಜಿ ಸಲ್ಲಿಸಿದ್ದರು. ತೀರ್ಪಿನಿಂದ ಯೋಜನೆ ವಿರೋಧಿಸಿದ್ದ ಪರಿಸರವಾದಿಗಳಿಗೆ ವ್ಯಾಪಕ ಹಿನ್ನಡೆಯಾಗಿದೆ.

‘ಎತ್ತಿನಹೊಳೆ ಯೋಜನೆ’ ಮೂಲಕ ಕುಡಿವ ನೀರಿನ ಸಮಸ್ಯೆ ನಿವಾರಿಸುವುದು ನಮ್ಮ ಉದ್ದೇಶ. ಇದನ್ನು ನೀರಾವರಿಗೆ ಬಳಸಿಕೊಳ್ಳುವುದಿಲ್ಲ. ನೀರು ಪೂರೈಕೆಯಾಗಲಿರುವ ಜಿಲ್ಲೆಗಳ 524 ಕೆರೆಗಳಲ್ಲಿ ನೀರನ್ನು ತುಂಬಿಸಿ, ಅಂತರ್ಜಲ ಹೆಚ್ಚಿಸಲಿದ್ದೇವೆ. ಪಶ್ಚಿಮಘಟ್ಟದ ಪರಿಸರಕ್ಕೆ ಹಾನಿ ಮಾಡದೆ ಯೋಜನೆ ಜಾರಿ ಮಾಡುತ್ತೇವೆ ಎಂದು ರಾಜ್ಯ ಸರ್ಕಾರದ ವಕೀಲರು ವಾದಮಂಡನೆ ವೇಳೆ ನ್ಯಾಯಾಧಿಕರಣಕ್ಕೆ ವಿವರಿಸಿತ್ತು. ಇದಕ್ಕೆ ಆಕ್ಷೇಪಿಸಿದ್ದ ಅರ್ಜಿದಾರರು, ‘ಈ ನೀರನ್ನು ನೀರಾವರಿ ಯೋಜನೆಗಳಿಗೆ ಬಳಸಿಕೊಳ್ಳುವ ದುರುದ್ದೇಶ ರಾಜ್ಯ ಸರ್ಕಾರದಲ್ಲಿದೆ, ಇದು ಕೇವಲ ಕುಡಿಯುವ ನೀರಿನ ಯೋಜನೆಯಾಗಿದ್ದರೆ ಕರ್ನಾಟಕ ನೀರಾವರಿ ನಿಗಮವನ್ನು ಪ್ರತಿವಾದಿಯನ್ನಾಗಿ ಮಾಡುವ ಉದ್ದೇಶವೇನಿತ್ತು‘ ಎಂದು ಪ್ರಶ್ನಿಸಿದ್ದರು. ಇದೀಗ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್​ಜಿಟಿ) ಯೋಜನೆ ಅನುಷ್ಠಾನಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.


ಸಂಬಂಧಿತ ಟ್ಯಾಗ್ಗಳು

ಷರತ್ತುಬದ್ದ ಎತ್ತಿನ ಹೊಳೆ ಹೊಳೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ