ಬಂತು ಆರ್.ಎಸ್.ಎಸ್. ಬುಲಾವ್..!

Kannada News

07-10-2017

ಬೆಂಗಳೂರು: ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ಆರ್‍ಎಸ್‍ಎಸ್ ಬುಲಾವ್ ನೀಡಿದೆ. ನಾಳೆ ಬೆಳಿಗ್ಗೆ ಚಾಮರಾಜಪೇಟೆಯ ಕೇಶವ ಕೃಪಾದ ಕಚೇರಿಗೆ ಯಡಿಯೂರಪ್ಪ ಮತ್ತು ಈಶ್ವರಪ್ಪ ಆಗಮಿಸಬೇಕೆಂದು ಆರ್‍ಎಸ್‍ಎಸ್ ಉಸ್ತುವಾರಿ ಸಿ.ಎಸ್.ಮುಕುಂದ್ ಸೂಚಿಸಿದ್ದಾರೆ. ಹೀಗಾಗಿ ನಾಳೆ ಈ ಇಬ್ಬರು ಪ್ರಮುಖರಿಗೆ ಸಂಘ ಪರಿವಾರದ ನಾಯಕರು ಯಾವ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎಂಬುದು ಪಕ್ಷದ ವಲಯದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ವಿನಯ್ ಅಪಹರಣ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವ ಕಾರಣ ಇಬ್ಬರನ್ನು ಮುಖಾಮುಖಿ ಭೇಟಿ ಮಾಡಿಸಿ ವಿವಾದಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಈಶ್ವರಪ್ಪ ಆಪ್ತರಾಗಿದ್ದ ವಿನಯ್ ಅಪಹರಣದ ಹಿಂದೆ ಯಡಿಯೂರಪ್ಪ ಆಪ್ತ ಸಂತೋಷ್ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್‍ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಅಲ್ಲದೆ ಖುದ್ದು ಯಡಿಯೂರಪ್ಪನವರಿಗೂ ಸಹ ಠಾಣೆಗೆ ಬರಬೇಕೆಂದು ನೋಟಿಸ್ ನೀಡಲಾಗಿತ್ತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ