ಮೀಟರ್ ಬಡ್ಡಿ ದಂಧೆಕೋರನ ಬಂಧನ !

Kannada News

07-10-2017

ಬೆಂಗಳೂರು: ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಕೆ.ಆರ್.ಪುರಂ  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪುರಂ ನ ಪ್ರಕಾಶ್(40)ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಖಾಲಿ ಚೆಕ್‍ ಗಳು ಆಸ್ತಿ-ಪಾಸ್ತಿಯ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ.

ಆರೋಪಿ ಕಳೆದ ಕೆಲ ವರ್ಷಗಳಿಂದ ಶೇ.15ರಿಂದ 20ರ ಬಡ್ಡಿದರದಲ್ಲಿ ಸಾಲ ಕೊಟ್ಟು ಹಣ ವಸೂಲಿ ಮಾಡುತ್ತಿದ್ದ. ಬಡ್ಡಿ ಕೊಡದವರಿಗೆ ಬೆದರಿಸಿ ಸುಲಿಗೆ ಮಾಡುತ್ತಿದ್ದು, ಖಚಿತ ಮಾಹಿತಿಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ವೈಟ್‍ಫೀಲ್ಡ್ ವಿಭಾಗದಲ್ಲಿ ಮೀಟರ್ ಬಡ್ಡಿ ದಂದೆ ನಡೆಸುತ್ತಿದ್ದ ನಾಲ್ಕನೆ ಪ್ರಕರಣ ಇದಾಗಿದೆ. ಇತ್ತೀಚಿಗೆ ನಗರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ನಗರದಲ್ಲಿ ಮೀಟರ್ ಬಡ್ಡಿ ದಂಧೆ ಹತ್ತಿಕ್ಕುವಂತೆ ಸೂಚನೆ ನೀಡಿದ್ದು, ಅಲ್ಲಿಂದ ಬಡ್ಡಿ ದಂಧೆ ನಡೆಸುವವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಮೀಟರ್ ದಂಧೆಕೋರನ ಬಂಧನ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ