ಟೆಖಿ ಹತ್ಯೆ...

Kannada News

10-10-2017

ಒಡಿಶಾ ಮೂಲದ 25 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಡಿವಾಳದ ತಾವರೆಕರೆ ಮುಖ್ಯರಸ್ತೆಯ ಚಾಕೋಲೇಟ್ ಕಾರ್ಖಾನೆಯ ಬಳಿ  ನಡೆದಿದೆ.

ಕೊಲೆಗೀಡಾದ ಟೆಕ್ಕಿಯನ್ನು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಣೊಯ್ ಮಿಶ್ರಾ ಎಂದು ಗುರುತಿಸಲಾಗಿದೆ. ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿ ತಡರಾತ್ರಿ ಹೋಗುತ್ತಿದ್ದಾಗ, ಎದೆ ಮತ್ತು ಹೊಟ್ಟೆಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಚಾಕು, ಹೊಟ್ಟೆಯ ಆಳಕ್ಕೆ ಇಳಿದು ಗಂಭೀರವಾಗಿ ಗಾಯಗೊಂಡಿದ್ದ ಮಿಶ್ರಾ ಅವರನ್ನು ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಮಡಿವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ