ಎರಡು ಜೀವ ಬಲಿ ಪಡೆದ ಗೋಡೆ !

Kannada News

11-10-2017

ವಿಜಯಪುರ: ರಾಜ್ಯದೆಲ್ಲೆಡೆ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ, ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಕಳೆದೊಂದು ವಾರದಿಂದ ಸುರಿದ ಮಳೆಗೆ, ಶಿಥಿಲಗೊಂಡಿದ್ದ ನೆರೆಮನೆಯ ಗೋಡೆ ಬೆಳಗಿನ ಜಾವ ಏಕಾಏಕಿ ಕುಸಿದುಬಿದ್ದಿದೆ. ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕೆಳಗಡೆ ಸಿಲುಕಿ ತಾಯಿ ಮಗಳು ಸಾವನ್ನಪ್ಪಿದ್ದಾರೆ. ತಾಯಿ ಶಂಕ್ರಮ್ಮ ರಾಮಚಂದ್ರಪ್ಪ ಔರಾದಿ, ಮತ್ತು ಮಗಳು ಮಹಾದೇವಿ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ವಿಜಯಪುರ ಎರಡು ಜೀವ ಬಲಿ ಪಡೆದ ಗೋಡೆ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ