ಹಾಸನದ ತಾಯಿಯ ನೋಡುವ ಭಾಗ್ಯ !

Kannada News

11-10-2017

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ಮಹೋತ್ಸವ ನಾಳೆಯಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಇದರ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ತಿಳಿಸಿದ್ದಾರೆ.

ಹಾಸನಾಂಬೆ ದೇವಾಲಯದ ಬಳಿ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಅವರು, ನಾಳೆಯಿಂದ 21 ರವರೆಗೆ ಹಾಸನಾಂಬದೇವಿ ದೇವಾಲಯದ ಬಾಗಿಲು ತೆರೆದಿರುತ್ತದೆ. ಆದರೆ ಬಾಗಿಲು ತೆರೆಯುವ ನಾಳೆ ಹಾಗೂ ಬಾಗಿಲು ಮುಚ್ಚುವ ದಿನವಾದ ಅ.21ರಂದು ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಈ ಬಾರಿ ಹೆಚ್ಚಿನ ಪಾಸ್‍ಗಳ ವಿತರಣೆ ಇರುವುದಿಲ್ಲ. ಪೂಜಾ ಅವಧಿಯನ್ನು ಕಡಿಮೆಗೊಳಿಸಲಾಗಿದ್ದು, ಅತಿ ಗಣ್ಯರ ಹಾಸನಾಂಬ ದರ್ಶನದ ವೇಳೆ ಹೆಚ್ಚಿನ ಕಾಲ ವ್ಯಯವಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಬಾರಿ ಭಕ್ತಾದಿಗಳಿಗೆ ಪ್ರಸಾದವನ್ನು ಹಾಸನಾಂಬ ದೇವಾಲಯದಿಂದ, 200 ಮೀಟರ್ ದೂರದಲ್ಲಿರುವ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ವಿತರಿಸಲಾಗುವುದು ಮತ್ತು ತುರ್ತು ದರ್ಶನ ಬಯಸುವವರು ವಿಶೇಷ ದರ್ಶನದ ಪಾಸ್ ಪಡೆಯಬಹುದು ಎಂದು ಮಾಹಿತಿ ನೀಡಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ