ಸಿದ್ದು ಪುತ್ರನಿಗೆ ಶಂಕರ್ ಬಿದರಿ ಸವಾಲ್..?

Kannada News

11-10-2017

ಬೆಂಗಳೂರು: ಜಿದ್ದಾಜಿದ್ದಿನ ರಣರಂಗವಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಿಂದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇದೇ ಕ್ಷೇತ್ರದಿಂದ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ. ಸಿದ್ದುಗೆ, ರಾಜಕೀಯ ಪುನರ್ ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದ ಕೊನೆಯದಾಗಿ ಸ್ಪರ್ಧಿಸಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವರುಣ ಕ್ಷೇತ್ರದಿಂದ ಸಿದ್ದರಾಮಯ್ಯನವರ ಪುತ್ರ ಕಣಕ್ಕಿಳಿದರೆ ಅವರಿಗೆ ಪ್ರಬಲ ಸ್ಪರ್ಧಿಯಾಗಿ ಬಿಜೆಪಿ ಶಂಕರ್ ಬಿದರಿ ಅವರನ್ನೇ ಕಣಕ್ಕಿಳಿಸಲು ಲೆಕ್ಕಾಚಾರ ಹಾಕಿದೆ. ವರುಣದಲ್ಲಿ ಹೇಳಿಕೇಳಿ ಪ್ರಬಲ ಅಭ್ಯರ್ಥಿಗಳಿಲ್ಲ, ಡಾ.ಯತೀಂದ್ರ ಸ್ಪರ್ಧಿಸಿದರೆ ಅವರಿಗೆ ಸರಿಸಮನಾದ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ಲೆಕ್ಕಾಚಾರ ಹಾಕಿದೆ.

ವರುಣ ಕ್ಷೇತ್ರದಲ್ಲಿ ಲಿಂಗಾಯಿತ ಮತಗಳು ನಿರ್ಣಾಯಕವಾಗಿವೆ. ಶಂಕರ್ ಬಿದರಿ ಇದೇ ಸಮುದಾಯಕ್ಕೆ ಸೇರಿರುವುದರಿಂದ ಜೊತೆಗೆ ಈ ಭಾಗದಲ್ಲಿ ಅವರು ಹಿಂದೆ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಕಾರಣ ಜನರು ಕೈ ಹಿಡಿಯಬಹುದೆಂಬ ವಿಶ್ವಾಸ ಅವರಲ್ಲಿದೆ. ಈ ಹಿಂದೆ ಬಿದರಿ ಬಾಗಲಕೋಟೆ ಜಿಲ್ಲೆಯ ತೇರೆದಾಳ ಇಲ್ಲವೆ ವಿಜಾಪುರ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ಬಿಜೆಪಿ ವರುಣದಿಂದಲೇ ಅಖಾಡಕ್ಕಿಳಿಸಲು ಸಜ್ಜಾಗಿದೆ ಎನ್ನಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ