ಬಸ್ಸಲ್ಲಿ ಸಿಕ್ತು 34 ಕೆಜಿ ಚಿನ್ನ !

Kannada News

12-10-2017

ಬೆಂಗಳೂರು: ಕರ್ನಾಟಕದಿಂದ ಕೇರಳಕ್ಕೆ 34 ಕೆಜಿ ಚಿನ್ನವನ್ನು ಅಕ್ರಮವಾಗಿ ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಕೇರಳದ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಸ್ ನಲ್ಲಿ ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಲ್ಲಿನ ತೋಲ್ಪೆಟ್ಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ 11 ಕೋಟಿ ಮೌಲ್ಯದ 34 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಇಂಟೆಲಿಜೆನ್ಸ್ ಇನ್ಸ್ ಪೆಕ್ಟರ್ ಎ.ಜೆ.ಶಾಜಿ ಹೇಳಿದ್ದಾರೆ. ಅಕ್ರಮ ಚಿನ್ನ ಹಾಗೂ ಮಾದಕ ವಸ್ತುಗಳ ಸಾಗಾಟ ರಾತ್ರಿಕಾಲದಲ್ಲೇ ನಡೆಯುತ್ತವೆ. ಕೇರಳ ಹಾಗೂ ಕರ್ನಾಟಕ ಗಡಿಯಲ್ಲಿ ರಾತ್ರಿ ವೇಳೆಯಲ್ಲಿ ತೆರೆದಿರುವ ಚೆಕ್ ಪೋಸ್ಟ್ ತೋಲ್ಪೆಟ್ಟಿ ಮಾತ್ರ. ಹೀಗಾಗಿ ಯಾವುದೇ ಅಕ್ರಮ ಸಾಗಾಟ ನಡೆದರೂ ಈ ಚೆಕ್ ಪೋಸ್ಟ್ ಮೂಲಕವೇ ನಡೆಯಬೇಕು. ಮುಂಜಾನೆ 4 ಗಂಟೆಗೆ ಈ ದಾರಿಯಲ್ಲಿ ಸಂಚರಿಸುತ್ತಿದ್ದ ಲಕ್ಷುರಿ ಬಸ್ ತಪಾಸಣೆ ವೇಳೆ ನಮಗೆ 34 ಕೆಜಿ ಚಿನ್ನ ಸಿಕ್ಕಿದೆ ಎಂದು ಹೇಳಿದ್ದಾರೆ.

ಬಂಧಿತರನ್ನು ಶಂಕೇಶ್ ಬಿ ಜೈನ್, ಅಭಯ್ ಎಂ ಜೈನ್, ಚಾಂಬರಂ ದೇವಸಿ, ಮದನ್ ಲಾಲ್ ದೇವಸಿ, ವಿಕ್ರಮ್ ಸಿ ಹಾಗೂ ಕಮಲೇಶ್ ಜೈನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ಕಾಲೇಜ್ ಬ್ಯಾಗ್ ಹಾಗೂ 2 ಟ್ರಾವೆಲ್ ಬ್ಯಾಗ್ ಸೇರಿ ಒಟ್ಟು 4 ಬ್ಯಾಗ್ ಗಳಲ್ಲಿ ಯಾರಿಗೂ ಸಂಶಯ ಬಾರದಂತೆ ಪ್ಯಾಕ್ ಮಾಡಿದ್ದರು. ಇದೀಗ ಎಲ್ಲರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

 

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ