ನಾಲೆಗೆ ಹಾರಿ ಪ್ರಾಣ ಬಿಟ್ಟ ನಾರಿ !

Kannada News

12-10-2017

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆ, ಗೃಹಿಣಿಯೊಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಚಾವಡಘಟ್ಟ ಗ್ರಾಮದಲ್ಲಿ ನಡೆದಿದೆ.

32 ವರ್ಷದ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಚಾವಡಘಟ್ಟ ಗ್ರಾಮದ ಕಪನೀಗೌಡ, ಚಿಕ್ಕಮ್ಮ ದಂಪತಿಗಳ ಪುತ್ರಿಯಾಗಿರುವ ಅನ್ನಪೂರ್ಣರನ್ನು ಹೆಮ್ಮಡಹಳ್ಳಿ ಗ್ರಾಮದ ಮೋಹನ್ ಕುಮಾರ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಅನ್ನಪೂರ್ಣ ಚಾವಡಘಟ್ಟ ಗ್ರಾಮದ ಬಳಿ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೂವರು ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಇನ್ನು ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ