ದೇಗುಲದಲ್ಲಿ ವಸ್ತ್ರ ಸಂಹಿತೆ ಬೇಕೇ..?

Kannada News

12-10-2017 476

ಬೆಂಗಳೂರು: ದೇವಸ್ಥಾನ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ಕ್ರಮ ವಿರೋಧಿಸಿ ಇದೇ ತಿಂಗಳ 21 ರಂದು, ಕನ್ನಡ ಒಕ್ಕೂಟ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯ ವಸ್ತ್ರಧಾರಣೆ ಹಕ್ಕಿನ ಮೇಲೆ ಸರ್ಕಾರ ನಿರ್ಬಂಧ ಹೇರಲು ಮುಂದಾಗಿರುವುದು ಸರಿಯಲ್ಲ. ಪ್ರತಿಯೊಬ್ಬರು ಅವರು ಇಷ್ಟಪಟ್ಟಂತೆ ವಸ್ತ್ರ ಧರಿಸುವ ಸ್ವಾತಂತ್ರ್ಯ ಇದೆ. ಈ ಕಾರಣ ನಾವು ಈ ಹಕ್ಕು ಹರಣವನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಗೋವಾದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಗ್ರಹಿಸಲು ಅಕ್ಟೋಬರ್ 15 ರಂದು ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಇದೇ ವೇಳೆ ಹೇಳಿದರು. ಕನ್ನಡ ಪರ ಸಂಘಟನೆಗಳು ಕನ್ನಡ ಭಾಷೆ, ನೆಲಕ್ಕೆ ಸಂಬಂಧಿಸಿದ ಹೋರಾಟಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ