ಬೆಳೆ ನುಂಗಿಹಾಕಿದ ಮಳೆ !

Kannada News

12-10-2017

ರಾಯಚೂರು: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೂರಾರು ಎಕರೆ ಭತ್ತದ ಪೈರು ನೆಲಕಚ್ಚಿ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಮಳೆಯ ಅಭಾವದಿಂದ ನಲುಗಿದ್ದ ರೈತರು ಈಗ ಅತಿ ವೃಷ್ಟಿಗೆ ತುತ್ತಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಸುರಿದ ಭಾರೀ  ಗಾಳಿ-ಮಳೆಗೆ ತಾಲ್ಲೂಕಿನ ಸಿಂಗನೋಡಿ ಗ್ರಾಮದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದಿದ್ದ ಸೋನಮಸುರಿ ಭತ್ತ ಸೇರಿದಂತೆ ಹತ್ತಿ, ತೊಗರಿ, ಈರುಳ್ಳಿ ಬೆಳೆ ಸಂಪೂರ್ಣ ಹಾಳಾಗಿದೆ.

ಸತತ ಬರಗಾಲದಿಂದ ತತ್ತರಿಸಿದ ರೈತ ಈಗ ನಿರಂತರ ಮಳೆಯಿಂದ ಕಟಾವಿಗೆ ಬಂದ ಫಸಲು ಕೈತಪ್ಪಿದೆ. ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆ ನಷ್ಟ ಹೊಂದಿರುವ ರೈತರಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

ರಾಯಚೂರು ಬೆಳೆ ನುಂಗಿಹಾಕಿದ ಮಳೆ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ