ಗೌರಿ ಹತ್ಯೆ ಹಿಂದಿತ್ತಾ ಮೂವರ ಕೈವಾಡ..?

Kannada News

12-10-2017

ಬೆಂಗಳೂರು: ಗೌರಿ ಹತ್ಯೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಮೂವರು ಶಂಕಿತ ಆರೋಪಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ. ಮಾಲೆಗಾವ್ ಸ್ಫೋಟ ಪ್ರಕರಣದ ಆರೋಪಿ ಜಯಪ್ರಕಾಶ್, ದಾಬೋಲ್ಕರ್ ಮತ್ತು ಪನ್ಸಾರೆ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳಾದ ಪ್ರವೀಣ್ ಲಿಮ್ಕರ್, ಸಾರಂಗ್ ಆಕೋಲ್ಕರ್ ಮೇಲೆ ಎಸ್ಐಟಿ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೂವರು ಮಾಸ್ಟರ್ ಪ್ಲಾನ್ ನಡೆಸಿ ಹತ್ಯೆ ನಡೆಸಿರಬಹುದು ಎಂದು ಎಸ್ಐಟಿ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದು, ಈ ಮೂವರು ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು, ಈ ಹತ್ಯೆ ನಡೆಸಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.  ಮೂವರೂ ಈಗ ತಲೆಮರೆಸಿಕೊಂಡಿದ್ದು ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ಎನ್ಐಎ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ