ಬಿಜೆಪಿಗೆ ಸೋಲುವ ಭೀತಿ !

Kannada News

12-10-2017 290

ಮೈಸೂರು: ಸಿಎಂ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ.

83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮತ್ತು ಕಾರ್ಯಾಲಯ ಉದ್ಘಾಟನೆಗು ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ವಿರುದ್ಧ ಬಿಜೆಪಿಯ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ರಾಜಕೀಯ ಷಡ್ಯಂತ್ರ ರಚಿಸಿದ್ದಾರೆ. ಸಿಎಂ ಸರಳ ಸಜ್ಜನಿಕೆಯ ವ್ಯಕ್ತಿ, ವಿನಾಕಾರಣ ಭ್ರಷ್ಟಾಚಾರದ ಆರೋಪ ಮಾಡಲಾಗುತ್ತಿದೆ. ಸಿಎಂ ಇದುವರೆಗೂ ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ಸೋಲುವ ಭೀತಿಯಲ್ಲಿ ಆದಾರ ರಹಿತ ಆರೋಪ ಮಾಡ್ತಿದ್ದಾರೆ. ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದರು.

ಮಳೆ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಳೆ ನಿಂತ ನಂತರ ಎಲ್ಲ ನಗರದ ರಸ್ತೆಯ ಗುಂಡಿಗಳನ್ನು ಮುಚ್ಚಲಿದ್ದೇವೆ ಎಂದರು. ಇನ್ನು ಇದೇ ವೇಳೆ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ನೀಡಿದ ಅವರು, ಚುನಾವಣೆಯಲ್ಲಿ ಸೋಲಿಸಲು ಗೆಲ್ಲಿಸಲು ಇವರ್ಯಾರು. ಇವರ ಶಕ್ತಿ ಕಳೆದ ಚುನಾವಣೆಯಲ್ಲಿ ಜನರಿಗೆ ತಿಳಿದಿದೆ. ಮುಂಬರುವ ಚುನಾವಣೆಯಲ್ಲಿ ಜನರು ನಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ